ಉಡುಪಿ (ಸೆಪ್ಟೆಂಬರ್,25): ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ಇವರ ಕಛೇರಿಯ ನೋಟೀಸು ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ ಅಕ್ಟೋಬರ್ 1 ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
