ಅಬ್ಬನಡ್ಕ: ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಬೆಳ್ಮಣ್ಣು ಸಂಸ್ಥೆಯು ಪ್ರವರ್ತಿತ ಅಬ್ಬನಡ್ಕ ಲಿಯೋ ಕ್ಲಬ್‍ನ 2020-21ನೇ ಸಾಲಿನ ಅಧ್ಯಕ್ಷರಾಗಿ ನಂದಳಿಕೆ ಪ್ರಶಾಂತ್ ಪೂಜಾರಿಯವರು ಆಯ್ಕೆಯಾಗಿದ್ದಾರೆ.
ಇವರು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಯಶಸ್ವಿ ಕಾರ್ಯದರ್ಶಿಯಾಗಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಕಾರ್ಯದರ್ಶಿಯಾಗಿ, ಕೆದಿಂಜೆ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸದಸ್ಯರಾಗಿ ಪರಿಸರದ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.
ಅಬ್ಬನಡ್ಕ ಲಿಯೋ ಕ್ಲಬ್‍ನ ಕಾರ್ಯದರ್ಶಿಯಾಗಿ ವೀಣಾ ಹರೀಶ್ ಪೂಜಾರಿ, ಕೋಶಾಧಿಕಾರಿಯಾಗಿ ಹರಿಣಾಕ್ಷಿ ನಂದೀಶ್ ಪೂಜಾರಿಯವರನ್ನು ಆಯ್ಕೆ ಮಾಡಲಾಯಿತು.