ಉಡುಪಿ (ಜುಲೈ 30): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2014-15 ಸಾಲಿನ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಮತ್ತು 2019-20ನೇ ಶೈಕಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಎಂಎ/ಎo.ಕಾo ನ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ತಿಳಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮುಂದಿನ ದಿನದಲ್ಲಿ ಪರೀಕ್ಷೆಯನ್ನು ನಿಗದಿಪಡಿಸಿದ್ದು. 

ಪರೀಕ್ಷಾ ದಿನದ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ http://www.ksoumysuru.ac.in/  ನಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ, ಶುಲ್ಕದ ವಿವರಗಳನ್ನು ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ. ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನ ಆಗಸ್ಟ್ 10 ಆಗಿದ್ದು, ಅರ್ಜಿಯನ್ನು  ಎಲ್ಲ ವಿವರಗಳೊಂದಿಗೆ ಭರ್ತಿಮಾಡಿ ಅಂತರ್ಜಾಲ ಮೂಲಕವೇ ಸಲ್ಲಿಸಬೇಕೆಂದು ಉಡುಪಿ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.