ಉಡುಪಿ (ಸೆಪ್ಟೆಂಬರ್, 18): 2019-20 ಸಾಲಿನ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ಉದ್ಯಮಶೀಲತಾ, ಐರಾವತ, ಮೈಕ್ರೋ ಕ್ರೆಡಿಟ್ ಪ್ರೇರಣಾ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಹ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂರ‍್ಸ್ ಹಾಗೂ ಅವರ ಅವಲಂಬಿತರಿAದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.

    ಆಸಕ್ತರುwww.ksskdc.kar.nic.in  ಆನ್‌ಲೈನ್ ಮೂಲಕ ಅಥವಾ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮ, “ಬಿ” ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಇವರಿಗೆ ಸಲ್ಲಿಸಬೇಕು.

   ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.