ಉಡುಪಿ,(ಅಕ್ಟೋಬರ್ 20):  ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಂದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‍ಗಳ ಕೋರ್ಸ್‍ಗಳಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 29 ರ ವರೆಗೆ ವಿಸ್ತರಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ದೂರವಾಣಿ ಸಂಖ್ಯೆ: 0820-2570244 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.