ಉಡುಪಿ,(ಡಿಸೆಂಬರ್ 28): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಷ್ಟಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆಯನ್ನು ಡಿಸೆಂಬರ್ 29 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
