ಉಡುಪಿ (ಸೆಪ್ಟೆಂಬರ್ 24): ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯತ್ ಪ್ರದೇಶವನ್ನು ಬೈಂದೂರು ಪಟ್ಟಣ ಪಂಚಾಯತ್‌ಯನ್ನಾಗಿ ಮೇಲ್ದರ್ಜೇಗೇರಿಸಿ ರಾಜ್ಯ ಸರಕಾರ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.
ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕಾರ್ಯನಿರ್ವಹಣೆಗಾಗಿ ಪಟ್ಟಣ ಪಂಚಾಯತ್‌ಗೆ ಸಂಬoಧಿಸಿದ ತಹಶೀಲ್ದಾರ್‌ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆಯಲ್ಲಿ ನಿರ್ದೇಶನ ನೀಡಲಾಗಿದೆ.
ಆದ್ದರಿಂದ ಪಟ್ಟಣ ಪಂಚಾಯತ್‌ನ ದೈನಂದಿನ ಕಾರ್ಯನಿರ್ವಹಣೆಗಾಗಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಬೈಂದೂರು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಬೈಂದೂರು ತಹಶೀಲ್ದಾರರನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.