ಉಡುಪಿ ಮಾರ್ಚ್ 21 (ಕರ್ನಾಟಕ ವಾರ್ತೆ): ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಹಾಗೂ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ರಾಜ್ಯ, ಹೊರರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ಆಸಕ್ತರಾದ ಹವ್ಯಾಸಿ ಕಲಾತಂಡಗಳ ಸಂಘಟಕರು ತಮ್ಮ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ಮತ್ತು ಕಲಾವಿದರ ವಿವರಗಳೊಂದಿಗೆ ಮೇ. 2 ರ ಒಳಗೆ ಅರ್ಜಿಯನ್ನು ಯಕ್ಷಗಾನ ಅಕಾಡೆಮಿಗೆ ಸಲ್ಲಿಸುವಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಪ್ರೊ. ಎಂ.ಎ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
