ಉಡುಪಿ: ರವಿವಾರ ರಾತ್ರಿ ಮಳೆ ಸಹಿತ ಸಿಡಿಲು ಆರ್ಭಟಿಸಿದ್ದು ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕಟಪಾಡಿ ಜೆ.ಎನ್. ನಗರ ಪಡು  ಏಣಗುಡ್ಡೆ ನಿವಾಸಿ ಭರತ್ (22) ಮೃತ ಯುವಕ. ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದ ಯುವಕ ಸಿಡಿಲು ಬಡಿದು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿ ಆಗದೆ ಅಷ್ಟರಲ್ಲೇ  ಸಾವನ್ನಪ್ಪಿದ್ದಾನೆ. ಕಾಪು ಠಾಣೆಯ ಠಾಣಾಧಿಕಾರಿ ರಾಜ್ ಶೇಖರ್ ಸಾಗನೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.