ಉಡುಪಿ, (ಅಕ್ಟೋಬರ್ 22) : ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಉಡುಪಿ ಕಚೇರಿ ವ್ಯಾಪ್ತಿಯಲ್ಲಿ, ಕರ್ನಾಟಕ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿ ಸರಕಾರಕ್ಕೆ ಪಾವತಿಸಬೇಕಾದ ಮೋಟಾರು ವಾಹನ ತೆರಿಗೆಯನ್ನು ಪಾವತಿಸದೇ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್, ೩ ಬಸ್, ಸರಕುವಾಹನ, ಮೋಟಾರ್ ಕ್ಯಾಬ್ ಮತ್ತು ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದು, ಸದರಿ ವಾಹನಗಳನ್ನು ನವೆಂಬರ್ ೨೪ ರಂದು ಬೆಳಗ್ಗೆ ೧೧ ಗಂಟೆಗೆ ಮಣಿಪಾಲದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಆವರಣದಲ್ಲಿ ಬಹಿರಂಗ ಹರಾಜು ನಡೆಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
