ಉಡುಪಿ (ಸೆಪ್ಟೆಂಬರ್, 19): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಜಿ. ಜಗದೀಶ್ , ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. 

    ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೌರಾಯಕ್ತ ಆನಂದ್ ಕಲ್ಲೋಳೀಕರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ  ನಿರ್ದೇಶಕ ಕುಮಾರ್ ಬೆಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು.