ಉಡುಪಿ,(ಡಿಸೆಂಬರ್ 8): ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿಸೆಂಬರ್ 10 ರಂದು ಬೆಳಗ್ಗೆ 11.30 ಕ್ಕೆ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಆಚರಿಸಲಾಗುತ್ತದೆ.

     ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

    ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಎಸ್, ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಗೌರವ ಕಾರ್ಯದರ್ಶಿ ಕೆ.ಜಯರಾಮ  ಆಚಾರ್ಯ ಸಾಲಿಗ್ರಾಮ, ಗೌರವ ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ ಮತ್ತು ರೆಡ್‌ಕ್ರಾಸ್‌ನ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿರುವರು.