ಉಡುಪಿ,(ಅಕ್ಟೋಬರ್ 28) : ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಬಿ ವರ್ಗ ಮಹಿಳೆ ಮತ್ತು ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಿರಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ನವೆಂಬರ್ 2 ರಂದು ಮಧ್ಯಾಹ್ನ ೨ ಗಂಟೆಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಯಲಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರವನ್ನು ನವೆಂಬರ್ 2 ರ ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ, ಚುನಾವಣೆಗೆ ಸ್ಪರ್ಧಿಸುವ ಕೌನ್ಸಿಲರ್ ಅಥವಾ ಸೂಚಕ ಕೌನ್ಸಿಲರ್ ಚುನಾವಣಾಧಿಕಾರಿಯವರಿಗೆ ಸಲ್ಲಿಸಬಹುದು.
ನಾಮಪತ್ರಗಳ ಪರಿಶೀಲನೆಯನ್ನು ಸಭೆಯ ಪ್ರಾರಂಭದಲ್ಲಿ ನಡೆಸಲಿದ್ದು, ಉಮೇದುದಾರಿಕೆಯನ್ನು ಹಿಂತೆಗೆದುಕೊಳ್ಳಲು ಅಪೇಕ್ಷಿಸುವವರು ಮಧ್ಯಾಹ್ನ 2.15 ರೊಳಗೆ ಚುನಾವಣಾಧಿಕಾರಿಯವರಿಗೆ ಅರ್ಜಿ ಸಲ್ಲಿಸಬಹುದು ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.