ದಕ್ಷಿಣ ಕನ್ನಡ:- ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಕನಪಡಿ ರವರ ತಾಲೂಕು ಪಂಚಾಯತ್ ಅನುದಾನದಲ್ಲಿ ಸುಮಾರು 4 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಒಳಚರಂಡಿ ಕಾಮಗಾರಿ ಶಿಲಾನ್ಯಾಸವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಸಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ,ವಲಯ ಅಧ್ಯಕ್ಷರಾದ ವಿಜಯ ಡಿಸೋಜ ಕಳ್ಳಿಗೆ,ರಮೇಶ್, ಮದುಸೂಧನ್ ಶೆಣೈ,ಪುರಸಭಾ ಸದಸ್ಯರಾದ ವಾಸು ಪೂಜಾರಿ, ದಿವಾಕರ ಪಂಬದಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.