ಮಂಗಳೂರು,(ಡಿಸೆಂಬರ್ 5):- ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ನೃತ್ಯ, ಸಂಗೀತ ಮುಂತಾದ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ ಮೂರು ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ (ತರಬೇತಿದಾರರು) ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು. ಸ್ವವಿವರಗಳನ್ನು ಒಳಗೊಂಡ ಅರ್ಜಿಯನ್ನು ಇತ್ತೀಚಿನ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 12 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ ಅಶೋಕನಗರ ಉರ್ವಸ್ಟೋರ್ ಮಂಗಳೂರು ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0824-2951327 ನ್ನು ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.