ಮಂಗಳೂರು, ಅಕ್ಟೋಬರ್ 2: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ, ಅಕ್ಟೋಬರ್ 2ರಂದು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಐವನ್ ಡಿಸೋಜಾ, ಮೊಯ್ದೀನ್ ಬಾವಾ, ಇಬ್ರಾಹೀಂ ಕೋಡಿಜಾಲ್, ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಮಿಥುನ್ ರೈ, ಕೆಪಿಸಿಸಿ ಕೋಡಿನೇಟರ್ ಮುರಳಿ ಶೆಟ್ಟಿ, ಅಬ್ದುಲ್ ಅಝೀಝ್ ಹೆಜಮಾಡಿ, ಸದಾಶಿವ್ ಉಳ್ಳಾಲ್, ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಸುರೇಂದ್ರ ಕಂಬಳಿ, ಶಬೀರ್ ಸಿದ್ದಕಟ್ಟೆ, ಸವಾದ್ ಗೂನಡ್ಕ, ಯೂಸುಫ್ ಉಚ್ಚಿಲ, ಚಂದ್ರಶೇಖರ್ ಪೂಜಾರಿ, ಸಿ.ಎಂ. ಮುಸ್ತಫಾ, ಮತ್ತಿತರರು ಉಪಸ್ಥಿತರಿದ್ದರು.