ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲೆಯ ಕುಮ್ಕಿ ಜಾಗದ ಕುರಿತು, ಕಾಣೆಬಾಣೆ ಜಾಗಗಳ ಕುರಿತು ಹಾಗೂ ಮೂಲಗೇಣಿ ಜಾಗಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕರ ನಿಯೋಗವು ಕಂದಾಯ ಸಚಿವರಾದ ಆರ್ ಅಶೋಕ್ ಅವರೊಂದಿಗೆ ಚರ್ಚಿಸಿದ್ದಾರೆ.

ಶೀಘ್ರವೇ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಚಿವರ ಸಮಕ್ಷಮದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲಾ ಶಾಸಕರು ಸಭೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಶ್ರೀ ಅಂಗಾರ, ಶಾಸಕ ಡಿ. ವೇದವ್ಯಾಸ್ ಕಾಮತ್,ಡಾ ಭರತ್ ಶೆಟ್ಟಿ,  ಉಮಾನಾಥ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.