ಮಂಗಳೂರು (ಅಕ್ಟೋಬರ್ 29):- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.
2020-21 ನೇ ಸಾಲಿನಲ್ಲಿ ಮಂಗಳೂರು ಜಿಲ್ಲಾ ಕಛೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ.15,000/- ಗಳ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೊರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಪಿಡಬ್ಲ್ಯೂಡಿ ಕಟ್ಟಡ, 2ನೇ ಮಹಡಿ, ನೆಹರೂ ಮೈದಾನ ಎದುರು ಮಂಗಳೂರು-1, ದೂ.ಸಂ: 0824-2424254 ನ್ನು ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್.ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.