ಮಂಗಳೂರು (ಅಕ್ಟೋಬರ್ 28):- ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗಳಲ್ಲಿ ವಾಹನಗಳು ಮತ್ತು ಡ್ರೈವಿಂಗ್ ಲೈಸನ್ಸ್ ಸಂಬಂಧಿತ ಅರ್ಜಿಗಳನ್ನು ಸಲ್ಲಿಸುವಾಗ ಸಾರ್ವಜನಿಕರು ಸಂಬಂಧಿಸಿದ ಎಲ್ಲಾ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲನೆಗೆ ಕಡ್ಡಾಯವಾಗಿ ಹಾಜರು ಪಡಿಸಬೇಕು.

  ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕು ಎಂದು ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.