ಪುತ್ತೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಶೈಕ್ಷಣಿಕ ವರ್ಷ 2020-21 ನೇ ಸಾಲಿನ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ, ಎಮ್‍ಬಿಎ, ಡಿಪ್ಲೋಮ, ಮತ್ತುಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭಿಸಿದ್ದು, ವಿವಿಧ ಕೋರ್ಸುಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಪುತ್ತೂರು ಸಂತ ಫಿಲೋಮಿನಾ ಕಾಲೇಜು ಕಲಿಕಾರ್ಥಿ ಸಹಾಯ ಕೇಂದ್ರದ ಮೂಲಕ ಆನ್‍ಲೈನ್‍ನಲ್ಲಿ ಪ್ರವೇಶಾತಿ ಪಡೆಯಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಕಲಿಕಾರ್ಥಿ ಸಹಾಯ ಕೇಂದ್ರದ ಸಂಯೋಜಕರಾದ ರಾಧಾಕೃಷ್ಣ ಗೌಡ ವಿ (9448858101) ಇವರಿಂದ ಪಡೆದುಕೊಳ್ಳಬಹುದು ಎಂದು ಕಾಲೇಜಿನ ಪಿಆರ್‍ಒ ಪ್ರಕಟಣೆ ತಿಳಿಸಿದೆ.