ಮಂಗಳೂರು:- ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಮುಂಜಾನೆಯಿಂದಲೇ ಬಿಟ್ಟು ಬಿಡದೆ ಮಳೆ ಸುರಿಯುತ್ತಾ ಇದ್ದು , ಜಿಲ್ಲೆಗಳಲ್ಲಿ ಮೂಡ ಮುಸುಕಿದ ವಾತಾವರಣ ಕಂಡು ಬರುತ್ತಾ ಇದ್ದು, ರಾತ್ರಿಯ ವೇಳೆಗೆ ಮತ್ತಷ್ಟು ಮಳೆ ಮತ್ತಷ್ಟು ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ಐದು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಯೆಲ್ಲೋ ಅಲರ್ಟ್‍ನ್ನು, ಸೆಪ್ಟೆಂಬರ್20ರಂದು ಆರೆಂಜ್ ಹಾಗೂ ಸೆಪ್ಟೆಂಬರ್21, 22ರಂದು ಭಾರಿ ಮಳೆಯಾಗಲಿರುವ,ಹಿನ್ನೆಲೆಯಲ್ಲಿ ರೆಡ್ ಅಲರ್ಟ್‍ನ್ನು ಈಗಾಗಲೇ ಘೋಷಣೆ ಮಾಡಲಾಗಿದೆ.