ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ಆಶ್ರಯದಲ್ಲಿ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆ ಕಾರ್ಯಕ್ರಮದ ಉದ್ಘಾಟನೆ, ಟ್ಯಾಬ್ ಬ್ಯಾಂಕಿಂಗ್, ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್ ಹಾಗೂ ವಿಡಿಯೋ ಕಾನ್ಫರೆನ್ಸ್ ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ” ಸಮಾರಂಭ ದಿನಾಂಕ 03-07-2020ನೇ ಶುಕ್ರವಾರ ಪೂರ್ವಾಹ್ನ 10.00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ ಬ್ಯಾಂಕಿನ ವಿವಿಧ ಯೋಜನೆಗಳಿಗೆ ಚಾಲನೆ ದೊರೆಯಲಿದೆ. ಈ ಸಂದರ್ಭದಲ್ಲಿ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ”ಯನ್ನು ಕರ್ನಾಟಕ ಸರಕಾರದ ಮಾನ್ಯ ಸಹಕಾರ ಸಚಿವರಾದ ಸನ್ಮಾನ್ಯ  ಎಸ್.ಟಿ. ಸೋಮಶೇಖರ್ ಇವರು ನೆರವೇರಿಸಲಿರುವರು.

ಬ್ಯಾಂಕಿನ “ಟ್ಯಾಬ್ ಬ್ಯಾಂಕಿಂಗ್” ಉದ್ಘಾಟನೆಯನ್ನು ಮಾನ್ಯ  ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಕರ್ನಾಟಕ ಸರ್ಕಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ  ಕೋಟ ಶ್ರೀನಿವಾಸ ಪೂಜಾರಿ ಇವರು ನೆರವೇರಿಸಲಿರುವರು.

ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರು ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನಳಿನ್‍ಕುಮಾರ್ ಕಟೀಲ್ ಇವರು ನೆರವೇರಿಸಲಿರುವರು. ವಿಡಿಯೋ ಕಾನ್ಫರೆನ್ಸ್ ಉದ್ಘಾಟನೆಯನ್ನು ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್, ಬೆಂಗಳೂರು ಇದರ ಅಧ್ಯಕ್ಷರಾದ ಸನ್ಮಾನ್ಯ  ಕೆ.ಎನ್. ರಾಜಣ್ಣ ಇವರು ನೆರವೇರಿಸಲಿರುವರು.

ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ವಹಿಸಲಿರುವರು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸನ್ಮಾನ್ಯ ಯು.ಟಿ. ಖಾದರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸನ್ಮಾನ್ಯ  ಡಿ. ವೇದವ್ಯಾಸ ಕಾಮತ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸನ್ಮಾನ್ಯ ಡಾ| ವೈ. ಭರತ್ ಶೆಟ್ಟಿ ಇವರು ಭಾಗವಹಿಸಲಿರುವರು ಎಂದು ಡಾ| ಎಂ.ಎನ್. ರಾಜೇಂದ್ರ ಕುಮಾರ್‍ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.