ಮಂಗಳೂರು:- ಅಕ್ಟೋಬರ್ 28 ರಂದು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ “ಜಾಗರೂಕ ಭಾರತ, ಸಮೃದ್ಧ ಭಾರತ” ಎಂಬ ವಿಷಯದ ಕುರಿತು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದರು.