ಮಂಗಳೂರು (ಅಕ್ಟೋಬರ್ 22):-ಪ್ರಸ್ತುತ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ 2 ವರ್ಷಗಳ ಐ.ಟಿ.ಐ/ದ್ವಿತೀಯ ಪಿ.ಯು.ಸಿ (ವಿಜ್ಞಾನ)/ದ್ವಿತೀಯ ಪಿ.ಯು.ಸಿ. (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವವರು ಡಿಪ್ಲೋಮಾ ಕೋರ್ಸು ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮುಖಾಂತರ ಅರ್ಜಿಗಳನ್ನು ಅಕ್ಟೋಬರ್ 29 ರೊಳಗೆ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2482334, ಮೊಬೈಲ್ ಸಂ:9480744667 ನ್ನು ಸಂಪರ್ಕಿಸಲು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.