ಮಂಗಳೂರು,(ಡಿಸೆಂಬರ್ 08):-  ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮತ್ತು  ಲಿಯೋ ಕ್ಲಬ್, ಮಂಗಳೂರು ಹಾಗೂ ಲಯನ್ಸ್ ಡಿಸ್ಟ್ರಿಕ್ಟ್ 317ಆ ಇದರ ಸಂಯುಕ್ತ  ಆಶ್ರಯದಲ್ಲಿ ರಕ್ತನಿಧಿ  ವೆನ್‍ಲಾಕ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ಜಿಲ್ಲಾ  ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮೇರಿಹಿಲ್ ಮಂಗಳೂರು  ಕಛೇರಿಯಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 9 ಗಂಟೆಯಿಂದ ರಕ್ತದಾನ ಶಿಬಿರ  ನಡೆಯಲಿದ್ದು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.