ಮಂಗಳೂರು (ಸೆಪ್ಟೆಂಬರ್ 19):- ಸಿವಿಲ್ ಪೊಲೀಸು ಕಾನ್‍ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆಗಳನ್ನು ಪೂರ್ವ ನಿಗಧಿಯಾಗಿರುವಂತೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ ತಾಲೂಕು ಇಲ್ಲಿನ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಐ.ಟಿ. ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಹಾಗೂ ಪಿ.ಜಿ. ಕಾಲೇಜುಗಳಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ 90 ನಿಮಿಷ ಮುಂಚಿತವಾಗಿ ಹಾಜರಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.