ಮಂಗಳೂರು (ಸೆಪ್ಟೆಂಬರ್ 18):- 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನಡೆಸಲಾಗುತ್ತಿರುವ ಬೆಳೆ ಸಮೀಕ್ಷೆ ಪ್ರಕಾರ ರೈತರು ಮತ್ತು ಖಾಸಗಿ ನಿವಾಸಿಗಳು ನಡೆಸಿರುವ ಬೆಳೆ ಸಮೀಕ್ಷೆ ಮಾಹಿತಿ ನೋಡಲು ಬೆಳೆ ದರ್ಶಕ ಆಪ್‍ನ್ನು ಬಿಡುಗಡೆ ಮಾಡಲಾಗಿದೆ. ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುತ್ತದೆ.

    ಬೆಳೆ ದರ್ಶಕ ಮೊಬೈಲ್ ಆ್ಯಪ್‍ನ ವೈಶಿಷ್ಟ್ಯತೆಗಳು ಇಂತಿವೆ:- ತಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆಯಲಾದ ಜಿ.ಪಿ.ಎಸ್. ಆಧಾರಿತ ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆ ಪಡೆಯಬಹುದು. ಬೆಳೆ ಸಮೀಕ್ಷೆಯ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಅಂಗೀಕರಿಸಿದ್ದಾರೋ ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು. ಬೆಳೆ ಸಮೀಕ್ಷೆ ವಿವರ ತಪ್ಪಾಗಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

    ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 15ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳೆ ದರ್ಶಕ ಮೊಬೈಲ್ ಆ್ಯಪ್ ಲಿಂಕ್ https://play.google.com/store/apps/details?id=com.crop.offcsreportskharif

ಹೆಚ್ಚಿನ ವಿವರಗಳಿಗೆ ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ದಕ್ಷಿಣ ಕನ್ನಡ ಜಿಲ್ಲೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.