ಮಂಗಳೂರು:- ರೈತ-ಕಾರ್ಮಿಕ-ದಲಿತ-ಮಹಿಳಾ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿರುವ ನರೇಂದ್ರ ಮೋದಿ ಸರಕಾರದ ವಿರುದ್ದ ಹಾಗೂ ದೆಹಲಿ ಗಲಭೆಯ ನೆಪದಲ್ಲಿ CPIM ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿಯವರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಸರಕಾರದ ಫ್ಯಾಸಿಸ್ಟ್ ಧೋರಣೆ ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಪ್ರತಿಭಟನೆಯಲ್ಲಿ CPIM ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ.ಬಾಲಕ್ರಷ್ಣ ಶೆಟ್ಟಿ, DYFI ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, CPIM ಜಿಲ್ಲಾ ನಾಯಕರಾದ ಸಂತೋಷ್ ಬಜಾಲ್, ಜಯಂತಿ ಬಿ.ಶೆಟ್ಟಿ, ಬಶೀರ್ ಪಂಜಿಮೊಗರು, ನವೀನ್ ಕೊಂಚಾಡಿ, ದಿನೇಶ್ ಶೆಟ್ಟಿ, CITU ನಾಯಕರಾದ ಜಯಲಕ್ಷ್ಮಿ, ಉಮೇಶ್ ಶಕ್ತಿನಗರ, ಮನೋಜ್ ಉರ್ವಾಸ್ಟೋರ್, ದಯಾನಂದ ಕೊಪ್ಪಲಕಾಡು, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ತಿಮ್ಮಯ್ಯ, ಕ್ರಷ್ಣ,ರಘುವೀರ್, DYFI ನಾಯಕರಾದ ಪ್ರಶಾಂತ್ ಉರ್ವಾಸ್ಟೋರ್, ಖಲೀಲ್ ಪಂಜಿಮೊಗರು, ನಾಗೇಂದ್ರ, ಮುಂತಾದವರು ಭಾಗವಹಿಸಿದ್ದರು.