ಮಂಗಳೂರು:-  ಕೋವಿಡ್-19 ಲಾಕ್‍ಡೌನ್‍ನಿಂದ ಸಂದಿಗ್ಧ ಪರಿಸ್ಥಿತಿಯಿಂದ ತೋಟಗಾರಿಕೆ ಬೆಳೆಗಾರರಿಗೆ ತೊಂದರೆ ಉಂಟಾಗಿದ್ದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಇಲಾಖೆಯ ಮೂಲಕ ಇಂತಹ ರೈತರ ತೋಟಗಳ ಅಭಿವೃದ್ದಿಗೆ ಸರಕಾರ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಸದರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ನಿರ್ವಹಣೆ, ಪುನಶ್ಚೇತನ, ಇಲಾಖಾ ಕ್ಷೇತ್ರಗಳಲ್ಲಿ ಅನುಮೋದಿತ ಕಾಮಗಾರಿಗಳು, ಕೃಷಿ ಹೊಂಡ ಮತ್ತು ಕೊಳವೆ ಬಾವಿ ಮರುಪೂರಣ ಘಟಕಗಳ ನಿರ್ಮಾಣ ಹಾಗೂ ಇತರೆ ಮಣ್ಣು ಮತ್ತು ನೀರು ಸಂರಕ್ಷಣೆ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಬಹುದಾಗಿದೆ.

    ಆಸಕ್ತರು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಸದರಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು.

    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, (ಜಿ.ಪಂ.) ಮಂಗಳೂರು 0824-2423615, ಹಿರಿಯ ಸಹಾಯಕ ತೋಟಗಾರಿಕೆ ತೋಟಗಾರಿಕರ ಕಛೇರಿ, (ಜಿ.ಪಂ.) ಬಂಟ್ವಾಳ 08255-234102, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, (ಜಿ.ಪಂ.) ಪುತ್ತೂರು 08251-230905, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, (ಜಿ.ಪಂ.) ಸುಳ್ಯ 08257-232020, ಹಿರಿಯ ಸಹಾಯಕ ತೋಟಗಾರಿಕ ತೋಟಗಾರಿಕೆರ ಕಛೇರಿ, (ಜಿ.ಪಂ.) ಬೆಳ್ತಂಗಡಿ 08256-232148. ಹೆಚ್ಚಿನ ಮಾಹಿತಿಗಾಗಿ ಇವರನ್ನು  ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.