ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ತನ್ನ 152 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್‌ 19 (ಶನಿವಾರ) ರಂದು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬೆಳಿಗ್ಗೆ 10.30 ಕ್ಕೆ ಆಯೋಜಿಸಿದೆ. ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಚಿನ್ನಪ್ಪಗೌಡ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ . ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ವಿಶ್ವವಿದ್ಯಾನಿಲಯದ ಕುಲಸಚಿವ ಕೆ. ರಾಜುಮೊಗವೀರ, ವಿವಿ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್‌ ಶರತ್‌ ಭಂಡಾರಿ ಉಪಸ್ಥಿತರಿರಲಿದ್ದಾರೆ, ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್‌ ಎಂ ಎ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.