ಮಂಗಳೂರು (ಜುಲೈ 30):- ದ.ಕ. ಜಿಲ್ಲೆಯಲ್ಲಿ ಜುಲೈ 30 ರಂದು ಬೆಳಿಗ್ಗೆ ನಡೆದ ಸಿಇಟಿ-2020 ಜೀವಶಾಸ್ತ್ರ ಪರೀಕ್ಷೆಗೆ 4,646 ವಿದ್ಯಾರ್ಥಿಗಳು ಹಾಜರಾಗಿದ್ದು, 2,988 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗೆ 6,482 ವಿದ್ಯಾರ್ಥಿಗಳು ಹಾಜರಾಗಿದ್ದು, 1,152 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ ಎಂದು ದ.ಕ. ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.