ಮಂಗಳೂರು (ಜುಲೈ 30):- ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿ ಅಬ್ದುಲ್ ಲತೀಫ್ ಬಿ.ಹೆಚ್ ಬಿನ್ ಬಿ.ಹೆಚ್ ಅಬ್ದುಲ್ ರಹಿಮಾನ್, ಜೇಡಿಗುಂಡಿ ಮನೆ, ಅಜ್ಜಾವರ ಗ್ರಾಮ ಮತ್ತು ಅಂಚೆ, ಸುಳ್ಯ ತಾಲೂಕು ರವರ ಸರ್ವೆ ನಂ:68/1 ರಲ್ಲಿ 4.64 ಎಕರೆ ಜಮೀನನ್ನು ನಿಗಮದ ಭೂ ಒಡೆತನ ಯೋಜನೆಯಡಿ ಮಾರಾಟ ಮಾಡಲು ಸಿದ್ಧರಿರುತ್ತಾರೆ.
ಆದುದರಿಂದ ಈ ಜಮೀನಿನಲ್ಲಿ ಯಾವುದಾದರು ಆಕ್ಷೇಪಣೆಗಳಿದ್ದರೆ 15 ದಿನಗಳೊಳಗೆ ನಿಗಮದ ಜಿಲ್ಲಾ ಕಚೇರಿಗೆ ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್ ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ದೂರವಾಣಿ ಸಂಖ್ಯೆ:0824-2420114 ಲಿಖಿತ ರೂಪದಲ್ಲಿ ದೂರು ಸಲ್ಲಿಸಲು ದ.ಕ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.