ಮಂಗಳೂರು ಮಾರ್ಚ್ 24 (ಕರ್ನಾಟಕ ವಾರ್ತೆ):- ಮಾರ್ಚ್23ರಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರಿಗೆ ಹೋಗುವ ಮಾರ್ಗದಲ್ಲಿ ಹೆರಿಗೆ ನೋವು ಜಾಸ್ತಿ ಕಾಣಿಸಿಕೊಂಡು 108 ಆಂಬುಲೆನ್ಸ್ ಹೆರಿಗೆಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಿ.ಸಿ. ರೋಡ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.