ಬೆಳ್ಮಣ್:- ರೋಟರಿ ಕ್ಲಬ್ ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಹಾಗೂ ವಿವಿಧ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪೌಷ್ಟಿಕಾಆಹಾರ ಸಪ್ತಾಹ  ಕಾರ್ಯಕ್ರಮವನ್ನು ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, 

 ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಿ. ಬಾಲಕೃಷ್ಣ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ ಹಾಗೂ ಪೌಷ್ಟಿಕ ಆಹಾರದ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ  ಸೌಭಾಗ್ಯ ಕಾರ್ಯಕ್ರಮಕ್ಕೆ ಶುಭ ಹಾರೈಸುದರೊಂದಿಗೆ ರೋಟರಿ ಬೆಳ್ಮಣ್ ನ ಕಾಯಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಮಣ್ ನ ಅಧ್ಯಕ್ಷರಾದ ರೋ| ಶುಭಾಷ್ ಕುಮಾರ್ ವಹಿಸಿದ್ದು ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ರೋ| ರಾಜೇಶ್ ಸಾಲ್ಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರೋ| ಮೋಹನ್ ದಾಸ್ ಶೆಟ್ಟಿ ನಿರೂಪಿಸಿ ಸಂಸ್ಥೆಯ ಕಾರ್ಯದರ್ಶಿ ರೋ| ರವಿರಾಜ್ ಶೆಟ್ಟಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು, ರೋಟರಿ ಸದಸ್ಯರು , ಆಶಾ ಕಾರ್ಯಕರ್ತೆಯರ ತಂಡ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.