ಮಂಗಳೂರು:- ದೇಶಕ್ಕೆ ಸ್ವಾತಂತ್ರ್ಯಗಳಿಸಿಕೊಡುವಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೇನಾನಿಗಳು ತ್ಯಾಗ ಬಲಿದಾನಗಳ ಮೂಲಕ ನೀಡಿರುವ ಕೊಡುಗೆ ಅಪಾರವಾದುದು. ಅಹಿಂಸಾ ತತ್ವದೊಂದಿಗೆ ರೂಪುಗೊಂಡ ಸ್ವತಂತ್ರ ಭಾರತವು ನೆಹರೂ, ಇಂದಿರಾಜಿಯಿಂದ ಮನ ಮೋಹನ್ ಸಿಂಗ್ ರ ಆಡಳಿತವರೆಗೂ ಅಭಿವೃದ್ಧಿಶೀಲ ರಾಷ್ಟ್ರವಾಗಿ ರೂಪುಗೊಂಡದ್ದು ಇತಿಹಾಸ. ಕಳೆದ ಆರುವರ್ಷಗಳಲ್ಲಿ ಭಾರತವು ಎಲ್ಲಾ ರಂಗಗಳಲ್ಲಿಯೂ ವಿಫಲಗೊಂಡಿರುವುದು ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ತಳಮಟ್ಟದಿಂದ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಜನಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ದೇಶದ ಅಖಂಡತೆಗೆ, ಪ್ರಗತಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಜರುಗಿದ 136ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಪ್ರಾರಂಭದಲ್ಲಿ ಪಕ್ಷದ ಧ್ವಜಾರೋಹಣ ನಡೆಸಲಾಯಿತು. ಸಭೆಯಲ್ಲಿ ಸಂವಿಧಾನದ ಪೀಠಿಕೆಯನ್ನು ರೈಗಳು ಬೋಧಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿ, ಬಂಟ್ವಾಳದಲ್ಲಿ ಜನವರಿಯಲ್ಲಿ ಪಕ್ಷದ ವಿಭಾಗೀಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕ ಮೊಯ್ದೀನ್ ಬಾವಾ, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಎಐಸಿಸಿ ಸದಸ್ಯೆ ಕವಿತಾ ಸನಿಲ್, ಮ.ನ.ಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಶೆಟ್ಟಿ, ಜೆ.ಅಬ್ದುಲ್ ಸಲೀಂ, ಸುರೇಂದ್ರ ಕಂಬಳಿ, ವಿಶ್ವಾಸ್ ಕುಮಾರ್ ದಾಸ್, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸೇವಾದಳ ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್, ಮ.ನ.ಪಾ ಸದಸ್ಯರು, ಜಿಲ್ಲಾ-ತಾಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಡಿಸಿಸಿ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಖಾಲಿದ್ ಉಜಿರೆ ವಂದಿಸಿದರು.