ಉಜಿರೆ : 8 ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ಆಯುಷ್ ಮಂತ್ರಾಲಯ ಭಾರತ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಬೆಂಗಳೂರು, ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳು ಸೇರಿದಂತೆ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದವೀಧರರ ಸಂಘ (ಇನಿಗ್ರಾ) ಇಂಡಿಯಾ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಎಂಟು ದಿನಗಳ ಉಚಿತ ಪ್ರಕೃತಿ ಚಿಕಿತ್ಸಾ ಮತ್ತು ಆರೋಗ್ಯ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.




ನವೆಂಬರ್ 10 ರಿಂದ ಆರಂಭವಾಗಿರುವ ಉಚಿತ ಪ್ರಕೃತಿ ಚಿಕಿತ್ಸಾ ಮತ್ತು ಆರೋಗ್ಯ ಜಾಗೃತಿ ಶಿಬಿರವು ದಿನಾಂಕ 18 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳು ಸೇರಿದಂತೆ 236 ತಾಲೂಕುಗಳಲ್ಲಿ ಏಕಕಾಲದಲ್ಲಿ ನಡೆಯುತ್ತಿವೆ. ಈಗಾಗಲೇ ಪ್ರತೀ ಜಿಲ್ಲೆಯನ್ನು ತಲುಪಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳ ತಂಡವು 200ಕ್ಕೂ ಅಧಿಕ ತಾಲೂಕುಗಳಲ್ಲಿ ಉಚಿತ ಪ್ರಕೃತಿ ಚಿಕಿತ್ಸೆ ಮತ್ತು ಆರೋಗ್ಯ ಜಾಗೃತಿ ಶಿಬಿರಗಳನ್ನು ಆಯೋಜಿಸಿದೆ.
ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆಯ ಪಂಚಸೂತ್ರಗಳು ಎಂಬ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ದಿನಕ್ಕೆ 2 ರಿಂದ 3 ಲೀಟರ್ ನೀರು ಸೇವನೆ, ಪ್ರತಿದಿನ ಒಂದು ಗಂಟೆ ವ್ಯಾಯಾಮ, ವಾರದಲ್ಲಿ ಒಮ್ಮೆ ಉಪವಾಸ, ದಿನಕ್ಕೆ ಎರಡು ಬಾರಿ ಪ್ರಾರ್ಥನೆ, ದಿನಕ್ಕೆ ಎರಡು ಭೋಜನದಂತಹ ಆರೋಗ್ಯ ಸಲಹೆಗಳನ್ನು ಪ್ರತಿ ಶಿಬಿರಗಳಲ್ಲಿ ತಂಡವು ಆರೋಗ್ಯ ಜಾಗೃತಿಯನ್ನು ಮೂಡಿಸುತ್ತಿದೆ. ಸುಮಾರು 500ಕ್ಕೂ ಹೆಚ್ಚಿನ ವೈದ್ಯರ ತಂಡ ಈ ಶಿಬಿರಗಳಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯಾದ್ಯಂತ 50 ಸಾವಿರಕ್ಕೂ ಅಧಿಕ ಗ್ರಾಮೀಣ ಜನರಿಗೆ ಶಿಬಿರವು ಫಲಕಾರಿಯಾಗಲಿದೆ. ಅದರಂತೆ ಅನೇಕ ಜನ ಗಣ್ಯರು, ಚಿತ್ರ ನಟರು ಹಾಗು ರಾಜಕೀಯ ಮುಖಂಡರುಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.
ಪ್ರಕೃತಿ ಚಿಕಿತ್ಸಾ ಶಿಬಿರಗಳಲ್ಲಿ ಉಪಚರಿಸುತ್ತಿರುವ ಕಾಯಿಲೆಗಳು :
- ಉಬ್ಬಸ, ನೇಸಲ್ ಅಲರ್ಜಿ, ಅತಿಶೀತ, ಕೆಮ್ಮು ಬ್ರಂಕೈಟಿಸ್, ರಕ್ತದೊತ್ತಡ, ಹೃದಯದ ತೊಂದರೆಗಳು
- ಮಧುಮೇಹ, ಸ್ಕೂಲಕಾಯ, ಥೈರೋಟಾಕ್ಸಿಕೋಸಿಸ್
- ಪಿತ್ತ ಕಾಮಾಲೆ, ಜಿರ್ಣಾಂಗದ ತೊಂದರೆಗಳು, ಭೇದಿ, ಆಮಶಂಕೆ
- ಚರ್ಮದ ಕಾಯಿಲೆಗಳು, ಸೋರಿಯಾಸಿಸ್, ಲೈಂಗಿಕ ಕಾಯಿಲೆಗಳು
- ತಲೆಸಿಡಿತ, ನಿದ್ರಾಹೀನತೆ, ಮಾನಸಿಕ ಉದ್ವೇಗ
- ನರಗಳ ದೌರ್ಬಲ್ಯ
- ಬೆನ್ನು ನೋವು, ಸಂಧಿವಾತ, ಪಕ್ಷವಾತ