ಮಂಗಳೂರು: ನಗರದ ಪ್ರತಿಷ್ಠಿತ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದು ಉತ್ತಮ ಸಾಧನೆ ಗೈದಿದ್ದಾರೆ.
ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ ಎಂಟು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ.
ಮನ್ವಿತ್ ನಾಯಕ್ 601 (96.16%) ಅಂಕಗಳಿಸುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ.
ಉಳಿದಂತೆ ವಿದ್ಯಾರ್ಥಿಗಳಾದ ಕರೀನಾ-95.52%, ಗ್ಯಾನೇಂದ್ರ ನಾಯಕ್- 94.88%, ದಿಶಾನ್ ಯರಭೋವಿ- 93.60%, ವಂಶಿಕ–85.76%, ಸಂಜನಾ-85.60%, ಝನೀರ -85.44%, ಜಿಶಾನಿ-85.12% ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ
ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರ ಪರವಾಗಿ ಅಭಿನಂದನೆಗಳು.