ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನದ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.