ಮಂಗಳೂರು, ಜೂ.12:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ  ಇಂಗ್ಲೀಷ್, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಎಂ.ಎ/ಎಂ.ಎಸ್ಸಿ –ಬಿ.ಎಡ್‍ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಗೌರವಧನ ರೂ. 14,000 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ:- 9620439218 ಅಥವಾ ಮಂಜನಾಡಿ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಇಲ್ಲಿಗೆ ಸಂಪರ್ಕಿಸಬಹುದು ಎಂದು  ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾ  ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.