ಮಂಗಳೂರು:  ಬಿಜೆಪಿ ಯುವಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ನರೇಂದ್ರ ಮೋದಿಜಿ ರವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಯುವ ಜಾಗೃತಿ ಕುರಿತ “ಯುವ ಚೌಪಾಲ್  (ಯುವ ಸಂವಾದ) ಕಾರ್ಯಕ್ರಮ ಪ್ರತಿ ಗ್ರಾಮ ಪಂಚಾಯತ್ ಹಾಗೂ ವಾರ್ಡ್ ಮಟ್ಟದಲ್ಲಿ ನಡೆಯಲ್ಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಸತೀಶ್ ಕುಂಪಲ, ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ಯುವಮೋರ್ಚ ಜಿಲ್ಲಾ ಅಧ್ಯಕ್ಷರಾದ ನಂದನ್ ಮಲ್ಯ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ,  ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ, ಮಾಧ್ಯಮ ಪ್ರಮುಖ ವಸಂತ ಪೂಜಾರಿ, ಮಂಗಳೂರು ದಕ್ಷಿಣ ಮಂಡಲ ಯುವಮೋರ್ಚ ಅಧ್ಯಕ್ಷರಾದ ಸಚಿನ್ ರಾಜ್ ರೈ ಉಪಸ್ಥಿತರಿದ್ದರು.