ಬಂಟ್ವಾಳ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ’ ಬಂಟ್ವಾಳ ವ್ಯವಸಾಯ ಸೇವಾ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಕಳೆದ 6 ತಿಂಗಳಿಂದ ಹಾಲು ಒಕ್ಖೂಟವು 25 ಸಾವಿರ ಲೀ ನಿಂದ 75 ನಾವಿರ ಲೀ ಗೆ ಹೆಚ್ಚುವರಿ ಮಾಡಿದ್ಧಿರಿ ಇದಕ್ಕೆ ಹೈನುಗಾರರು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರಣೀಬೂತರು. ಸರ್ಕಾರ ಹಾಗೂ ಒಕ್ಖೂಟವು ಸಹಕಾರ ನೀಡುತ್ತೀವೆ. ರಾಸುಗಳ ಖರೀದಿಗೆ ಒಂದು ಎಕರೆ ಇರುವವರಿಗೂ ರೂ3ಲಕ್ಷ ದ ವರೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ, ಇದರ ಸದುಪಯೋಗ ಹೈನುಗಾರ ಸದಸ್ಯರಿಗೆ ತಿಳಿಯಪಡಿಸಬೇಕು, ರೈತ ಬೆಳಗಿದರೆ ಭಾರತ ವಿಕಾಸವಾಗುತ್ತದೆ ಸಹಕಾರ ಪವಿತ್ರವಾದ ಕ್ಷೇತ್ರ , ಹಾಲು ಉತ್ಪಾದಕರ ಸಹಕಾರ ಸಂಘಗಳು ಬೆಳೆಯಬೇಕಾದರೆ ಮುಖ್ಯಕಾರ್ಯನಿರ್ವಾಹಣಾಧಿಕಾರಿಯವರ ಪಾತ್ರ ಮಹತ್ತರವಾಗಿದೆ ಎಂದರು.
ತರಬೇತಿ ಉದ್ಘಾಟಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೆಶಕರು ವಿವೇಕ್ ಡಿ ಮಾತನಾಡಿ ಹೊಸ ತಂತ್ರಜ್ಞಾನ ಆದಷ್ಟು ಬೇಗ ಅಳವಡಿಸಕೊಳ್ಳಬೇಕು ಎಂದರು. ಕಾರ್ಯದರ್ಶಿಗಳು ಉತ್ತಮವಾದ ತರಬೇತಿ ಹೊಂದಿದ್ದಲ್ಲಿ, ಕಾಲಕಾಲಕ್ಕೆ ಕಾಯ್ದೆಗಳ ತಿದ್ದುಪಡಿ ಅಂಶಗಳನ್ನು ಇಂತಹ ತರಬೇತಿ ಕಾರ್ಯಾಗಾರದಿಂದ ಪಡೆದು ತಮ್ಮ ಸಂಘದ ಸರ್ವತೋಮುಖ ಅಭಿವೃದ್ಧಿ ಸಾಧ್ಯ, ಸಂಘದ ನಿರ್ದೇಶಕರು ಮತ್ತು ಕಾರ್ಯದರ್ಶಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘದ ಏಳಿಗೆಗೆ ಪೂರಕ ಎಂದು ಹೇಳಿದರು.
ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ನಂದಾರಾಮ ರೈ,ಸವಿತಾ ಎನ್.ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಪದ್ಮಶೇಖರ್ ಜೈನ್ ,ಸಂಜೀವ ಪೂಜಾರಿ, ಸ್ಕ್ಯಾಡ್ಸ್ ಇದರ ಅಧ್ಯಕ್ಷರಾದ ರವೀಂದ್ರ ಕಂಬಳಿ, ಬಂಟ್ವಾಳ ವ್ಯವಸಾಯ ಸೇವಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕರುಣೇಂದ್ರ ಎಂ ಉಪಾಧ್ಯಕ್ಷರಾದ ಆದಿರಾಜ ಕೆ ಜೈನ್, ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ರವಿರಾಜ ಉಡುಪ ಉಪಸ್ಥಿತರಿದ್ಧರು.
ಸಭಾ ಕಾರ್ಯಕ್ರಮದ ಬಳಿಕ ತರಬೇತಿ ಶಿಬಿರದಲ್ಲಿ ದ.ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ. ಚಂದ್ರಶೇಖರ್ ಭಟ್ ಹಾಲಿನ ಗುಣಮಟ್ಟ, ರಾಸುಗಳ ನಿರ್ವಹಣೆ ಮತ್ತು ಒಕ್ಕೂಟದ ಯೋಜನೆಗಳು, ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ದ.ಕ ಸಹಕಾರಿ ಹಾಲು ಒಕ್ಕೂಟದ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ. ಸುಬ್ಬರಾವ್ ಲೆಕ್ಕಪತ್ರಗಳ ನಿರ್ವಹಣೆ, ಸಂಘದಲ್ಲಿ ಇರಬೇಕಾದ ಪ್ರಮುಖ ದಾಖಲೆ ಪುಸ್ತಕಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
ದ.ಕ ಜಿಲ್ಲಾ ಸಹಕಾರಿ ಯೂನಿಯನ್‍ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು.