ಮುಲ್ಕಿ:  ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ್ಬರು ಯುವಕರು ಅಕ್ರಮವಾಗಿ ಮಾದಕ ವಸ್ತುವಾದ MDMA ನೇದನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ  ಕೌಶಿಕ್ ದೇವಾಡಿಗ (26), ವಾಸ: ಬೋಜರಾಜ್ ಕಂಪೌಂಡು, ಕದ್ರಿ ಟೆಂಪಲ್ ನ್ಯೂ ರೋಡ್ , ಕದ್ರಿ ಮಂಗಳೂರು.

ಮಹಮ್ಮದ್ ಇರ್ಷಾದ್ ,ಅಕುಡು (29), ವಾಸ: ಜಲ್ಲಿಗುಡ್ಡೆ ಮನೆ  ಜಯನಗರ, ಬಜಾಲ್ ಪೋಸ್ಟ್ ,ಮಂಗಳೂರು, ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 9 ಗ್ರಾಂ ತೂಕದ ರೂ. 45,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 95,500/-ಆಗಬಹುದು. ಆರೋಪಿಗಳ ವಿರುದ್ಧ ಮುಲ್ಕಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಆರೋಪಿಗಳ ಪೈಕಿ ಕೌಶಿಕ್ ಎಂಬಾತನ ವಿರುದ್ಧ ಈ ಹಿಂದೆ ಗಾಂಜಾ ಸೇವನೆ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಹಾಗೂ ಮೊಬೈಲ್ ಸುಲಿಗೆ ಮಾಡಿದ ಪ್ರಕರಣವೊಂದು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ಇರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣವೊಂದು ದಾಖಲಾಗಿರುತ್ತದೆ. 

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ  ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.