ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ, ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳು, ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2025 ಅದ್ದೂರಿಯಾಗಿ ನಡೆಯಿತು. 

ಕಾರ್ಕಳ ವಿಧಾನಸಭಾ ಸದಸ್ಯರಾದ ವಿ ಸುನೀಲ್ ಕುಮಾರ್ ಅವರು ದೀಪ ಬೆಳಗಿ ತೆಂಗಿನ ಹೂ ಅರಳಿಸುವುದರ ಮೂಲಕ ಪ್ರತಿಭಾ ಕಾರಂಜಿಗೆ ವಿದ್ಯುಕ್ತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸುವುದು ಹಾಗೂ ಅದಕ್ಕೆ ನೀರೆರೆದು ಪೋಷಿಸುವುದು ಶಿಕ್ಷಕರ ಮತ್ತು ಹೆತ್ತವರ ಕರ್ತವ್ಯ. ಜೊತೆಗೆ ಸಮಾಜ ಕೂಡಾ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಬೇಕು. ಕಾರ್ಕಳದ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ. ಇಂತಹ ಸಾಧನೆಗಳು ನಿರಂತರವಾಗಿ ಮುಂದುವರಿಯುತ್ತಿರಬೇಕು.” ಎಂದು ಹೇಳಿದರು. 

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ “ಪ್ರಸಕ್ತ ಕಾಲಘಟ್ಟದಲ್ಲಿ ಮಕ್ಕಳ ನಿಯಂತ್ರಣ ಸವಾಲಿನದ್ದಾಗಿದೆ. ಮಕ್ಕಳನ್ನು ಸಂಸ್ಕಾರವಂತರಾಗಿ ಮಾಡಲು ಮೌಲ್ಯಯುತ ಶಿಕ್ಷಣ ಅಗತ್ಯ, ಮಕ್ಕಳಲ್ಲಿ ಪ್ರಜಾಪ್ರಭುತ್ವ ಭಾವನೆ ಬಲಗೊಳ್ಳುವಂತೆ ಮಾಡಬೇಕಾದುದು ನಮ್ಮ ಕರ್ತವ್ಯ” ಎಂದು ಹೇಳಿದರು. ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಅವರು ಮಾತನಾಡಿ “ಪ್ರತಿಭಾ ಸಂಪನ್ನರಿಗೆ ಪ್ರತಿಭಾ ಕಾರಂಜಿ ಸಮರ್ಪಕ ವೇದಿಕೆ, ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನಕ್ಕೆ ಲಭ್ಯವಾಗುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಹೇಳಿದರು. ಹೆಬ್ರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಂಕರ ಶೇರಿಗಾರ್ ಅವರು ಮಾತನಾಡಿ “ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಗಳನ್ನು ಹೊರಗೆಡವಲು ಅತ್ಯುತ್ತಮ ಅವಕಾಶ, ಶಿಕ್ಷಕರು ಹಾಗೂ ಪೋಷಕರು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಕ್ಕಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಬೇಕು” ಎಂದು ಹೇಳಿದರು. 

ಕ್ರೈಸ್ಟ್ ಕಿಂಗ್  ಎಜುಕೇಷನ್ ಟ್ರಸ್ಟ್ ನ ಸದಸ್ಯರಾದ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ “ಕಲೆ, ಸಾಹಿತ್ಯ, ಸಂಸ್ಕೃತಿಗಳು ಜನಮಾನಸದಲ್ಲಿ ಕಳೆಗುಂದುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ನಮ್ಮ ಮಕ್ಕಳ ಪಾಲಿಗೆ ಒದಗಿ ಬಂದಿರುವ ಸೌಭಾಗ್ಯ. ಮಕ್ಕಳು ಬಾಳೋದಕ್ಕೆ ಇರುವವರು ಬಳಲಳು ಅಲ್ಲ. ಮಕ್ಕಳು ಸಂತಸದಿಂದಿರಬೇಕು ಹೊರತು ಸಂಕಟದಿಂದಿರಬಾರದು” ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಗಿರಿಜಮ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಭಾ ಕಾರಂಜಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು. ಅಂತಾರಾಷ್ಟ್ರೀಯ ಕ್ರೀಡಾಪಟು ಕ್ರೈಸ್ಟ್ ಕಿಂಗ್ ನ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಹೆಗ್ಡೆ ಅವರನ್ನು ಭಾರತ್ ಸ್ಕೌಟ್ಸ್ ವತಿಯಿಂದ ಸನ್ಮಾನಿಸಲಾಯಿತು. 

ಕಳೆದ ಸಾಲಿನಲ್ಲಿ ಹತ್ತನೇ ತರಗತಿ ಪ್ರೇರಣಾ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಇದಕ್ಕೆ ಕಾರಣಕರ್ತರಾದ ಇಲಾಖೆಯ ಕಳೆದ ಸಾಲಿನ ಸಿಆರ್‍ಪಿ ಬಾಲಕೃಷ್ಣ ಅವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು. 

ಸಭಾ ಕಾರ್ಯಕ್ರಮ ಆರಂಭಕ್ಕೂ ಮೊದಲು ಅತಿಥಿ ಗಣ್ಯರನ್ನ್ಲುಗಾಂಧಿ ಮೈದಾನದಿಂದ ಚೆಂಡೆ, ಬ್ಯಾಂಡ್, ಕೊಂಬು ವಾದನದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.  ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ವಿವಿಧ ಮಹಾನ್ ನಾಯಕರ ಹಾಗೂ ವಿವಿಧ ಜನಪದ ವೇಷಗಳನ್ನು ತೊಟ್ಟು ಮನರಂಜಿಸಿದರು. ಕ್ರೈಸ್ಟ್ ಕಿಂಗ್  ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ದಯಾನಂದ ಮಲೆಬೆಟ್ಟು, ಪ್ರೌಢಶಾಲಾ ವಿಭಾಗದ ಶೆರಿಟಾ ನೊರೋನ್ಹ, ಪ್ರಾಥಮಿಕ ವಿಭಾಗದ ಉದಯರವಿ, ಕಾರ್ಕಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಕಕ್ಷರಾದ ಆನಂದ, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ಶಿಕ್ಷಕರ ಸಂಘದ ಅಧ್ಕಕ್ಷರಾದ ರಮಾನಂದ ಶೆಟ್ಟಿ, ಉಡುಪಿ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಕಕ್ಷರಾದ ಕೊಂಡಳ್ಳಿ ಪ್ರಭಾಕರ, ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಕಕ್ಷರಾದ ಸಂಜೀವ ಪೂಜಾರಿ, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಕಕ್ಷರಾದ ದೇವದಾಸ್ ಪಾಟ್ಕರ್, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಕಕ್ಷರಾದ ವಸಂತ, ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಕಕ್ಷರಾದ ಸಂತೋಷ್, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಕಕ್ಷರಾದ ರವೀಂದ್ರ ಶೆಟ್ಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘದ ಅಧ್ಯಕ್ಷರಾದ ಭುಜಂಗ, ಕಾರ್ಕಳ ತಾಲೂಕು ಅನುದಾನಿತ ಪ್ರಾಥಮಿಕಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಕಕ್ಷರಾದ ಪೃಥ್ವಿರಾಜ್ ಬಲ್ಲಾಳ್, ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ, ಬಿಆರ್‍ಸಿ ಉಮೆಶ್ ಕೆ.ಎಸ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಕಳ ತಾಲೂಕು ಪಿಎಂ ಪೋಷಣಾ ಅಭಿಯಾನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಭಾಸ್ಕರ ಟಿ ಅವರು ಸ್ವಾಗತಿಸಿ ಕಾರ್ಕಳ ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಇಂದಿರಾ ಅವರು ವಂದಿಸಿದರು. ಹೊಸ್ಮಾರು ಸಿಆರ್‍ಪಿ ಕೃಷ್ಣಕುಮಾರ್ ವಿವಧ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.