ಕಾಂಗ್ರೆಸ್ ಮತ್ತೆ 57 ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಅದರಲ್ಲಿ 17 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಸೇರಿದ್ದಾರೆ.

ಕರ್ನಾಟಕದಲ್ಲಿ ಮೊದಲ ಪಟ್ಟಿಯಲ್ಲಿ 7 ಮಂದಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿತ್ತು. ಒಟ್ಟು 24 ಆಗಿ,  ಇನ್ನು ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಬೇಕಾಗಿದೆ.  ಹಾಲಿ ಮಂತ್ರಿಗಳಾದ ಸತೀಶ್ ಜಾರಕಿಹೊಳಿ ಯವರ ಮಗಳು ಪ್ರಿಯಾಂಕಾ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಗ ಮೃಣಾಲ್‌, ರಾಮಲಿಂಗಾ ರೆಡ್ಡಿಯವರ ಮಗಳು ಸೌಮ್ಯಾ ಅವರುಗಳು ಕ್ರಮವಾಗಿ ಚಿಕ್ಕೋಡಿ, ಬೆಳಗಾವಿ, ಬೆಂಗಳೂರಿನಲ್ಲಿ ಟಿಕೆಟ್ ಪಡೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ರಾಧಾಕೃಷ್ಣ ಕಲಬುರಗಿ ಟಿಕೆಟ್ ಪಡೆದಿದ್ದಾರೆ.