ಉಡುಪಿ, ಜೂ.17: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ), ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಜೂ. 17ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಆದರೆ ದ್ವಿತೀಯ ಪಿಯುಸಿ ಪರೀಕ್ಷೆ -3 ನಿಗದಿಯಾದಂತೆ ನಡೆಯಲಿದೆ ಎಂದು ಆದೇಶದಲ್ಲಿ ಆದೇಶದಲ್ಲಿ ತಿಳಿಸಲಾಗಿದೆ.