ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಪುತ್ತೂರು ಉಪವಿಭಾಗದ ಪತ್ತಿನ ಹಾಗೂ ವಿವಿಧ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ವಿಶೇಷ ತರಬೇತಿ ಶಿಬಿರ ದಿನಾಂಕ 20-07-2023 ರಂದು ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಇದರ ಸಭಾಂಗದಲ್ಲಿ ಜರಗಿತು.
ಈ ತರಬೇತಿ ಶಿಬಿರವನ್ನು ಕರ್ನಾಟಕ ರಾಜ್ಯ ಸಹಕಾರ ಗ್ರಾಮೀಣಾಭಿವೃಧ್ದಿ ಬ್ಯಾಂಕ್ ಇದರ ನಿರ್ದೇಶಕರಾದ ರಾಜಶೇಖರ್ ಜೈನ್ ರವರು ಉದ್ಘಾಟಿಸಿ , ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರು ಸಿಬ್ಬಂಧಿಗಳಿಗೆ ತರಬೇತಿ ಅವಶ್ಯಕವಾಗಿದ್ದು ಎಸ್ಟೇ ಕೌಶಲ್ಯ ಇದ್ದರೂ ಸಹ ಬದಲಾವಣೆಯಾದ ವಿಷಯಗಳ ಬಗ್ಗೆ ತಿಳಿದು ಕೊಳ್ಳಲು ಇಂತಹ ತರಬೇತಿ ಅಗತ್ಯವಾಗಿದೆ ಎಂದು ಹೇಳಿದರು.
ಮಾನ್ಯ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ಉಪವಿಭಾಗ ತ್ರೀವೇಣಿ ರಾವ್ ಮಾತನಾಡಿ, ವಿವಿಧ ಸಹಕಾರ ಸಂಘಗಳು ಕಾಯ್ದೆ ಮತ್ತು ಉಪನಿಮಗಳ ಬಗ್ಗೆ ಸಂಪೂರ್ಣ ಮಾಹಿತಿ ತೆಗೆದು ಕೊಳ್ಳಬೇಕಾದ ಅವಶ್ಯಕತೆ ಇದೆ. ಕಾಯ್ದೆ ಮತ್ತು ನಿಯಮಗಳ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಕರೆ ನೀಡಿದರು.
ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ದ. ಕ. ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಇವರು ಮಾತನಾಡಿ ದ. ಕ ಜಿಲ್ಲೆ ಸಹಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದೂ ಪ್ರತಿಯೊಂದು ಸಹಕಾರ ಸಂಘಗಳು ಜಿಲ್ಲಾ ಸಹಕಾರಿ ಯೂನಿಯನ್ ಯಿಂದ ಏರ್ಪಡಿಸಿದ ಪ್ರತಿಯೊಂದು ತರಬೇತಿಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕು, ತರಬೇತಿ ಎಂಬುದು ನಿಂತ ನೀರಾಗಬಾರದು , ಹರಿಯುವ ನೀರಾಗಬೇಕು ಎಂದು ಹೇಳಿದರು.
ಈ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಹೆಚ್,ಎಸ್. ನಾಗರಾಜಯ್ಯ, ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರು, ವಿಶ್ವನಾಥ್ ನಾಯರ್, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ , ಎಸ್‍ಸಿಡಿಸಿಸಿ ಬ್ಯಾಂಕ್ ಮಂಗಳೂರು ಉಪಸ್ಥಿತರಿದ್ದರು. ಸಾವಿತ್ರಿ ರೈ ನಿರ್ದೇಶಕರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ಇವರು ಕಾರ್ಯಕ್ರಮವನ್ನು ನಿರೂಪಿಸಿದರು, ಎಸ್. ವಿ. ಹಿರೇಮಠ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇವರು ಸ್ವಾಗತಿಸಿ , ವಂದಿಸಿದರು.