ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮಂಗಳೂರು ತಾಲೂಕಿನ ಬಜ್ಪೆಯ ಕೆಂಜಾರಿನಲ್ಲಿ ಭಾರತೀಯ ಪೋಸ್ಟ್ ಗಾರ್ಡ್ ಅಕಾಡೆಮಿ ನಿರ್ಮಾಣಕ್ಕಾಗಿ ಮೀಸಲಿಟ್ಟಿರುವ ಪ್ರದೇಶದಲ್ಲಿ ಪ್ರಸ್ತುತ ವಿಪರೀತ ಮಳೆ ನೀರು ನಿಲ್ಲುತ್ತಿದೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದಲ್ಲಿ ಜುಲೈ 19ರಂದು ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಇತರರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾರತೀಯ ಪೋಸ್ಟ್ ಗಾರ್ಡ್ ಅಧಿಕಾರಿಗಳು ಹಾಜರಿದ್ದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.