ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದರು. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ಟಾಪ್ ನೀಡಲಾಯಿತು.
ಈ ವೇಳೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.