ಮನೆಯೊಡತಿ ಹಿರಿಯೆಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡುವ ಹಾಲಿ ಕಾಂಗ್ರೆಸ್ ಸರಕಾರದ ಯೋಜನೆಗೆ ಮೊದಲ ದಿನವೇ ಉತ್ಸಾಹದಲ್ಲಿ ಅರ್ಜಿಗಳು ಸಲ್ಲಿಕೆಯಾದವು.
ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,621 ಮತ್ತು ಉಡುಪಿ ಜಿಲ್ಲೆಯಲ್ಲಿ 2,526 ಅರ್ಜಿಗಳು ಸಲ್ಲಿಕೆಯಾಗಿವೆ. ಸರ್ವರ್ ಸಮಸ್ಯೆ ಕಾರಣದಿಂದ ಹಲವರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಆದ್ದರಿಂದ ಈ ಸಂಖ್ಯೆ ದುಪ್ಪಟ್ಟು ಆಗುವ ಸೂಚನೆ ಇದೆ.