ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಭಕ್ತಿ ಪೂರ್ವಕವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು. . ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ವಂ. ಗ್ಲ್ಯಾಡ್ವಿನ್ ಫೆರ್ನಾಂಡಿಸ್ ಹಾಗೂ ಗುಜರಾತ್ ಧರ್ಮ ಪ್ರಾಂತ್ಯದಲ್ಲಿ ಸೇವೆ ನೀಡುತ್ತಿರುವ ವಂ. ಜೇಮ್ಸ್ ವಾಸ್, ವಂ. ಜೆರಾಲ್ಡ್ ಪೀಟರ್ ಲೋಬೊ ಬಲಿಪೂಜೆಯನ್ನು ಅರ್ಪಿಸಿದರು.
ಪ್ರಧಾನ ಧರ್ಮಗುರುಗಳು ದೆವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಅರ್ಥ ಪೂರ್ಣ ಪ್ರವಚನ ನೀಡಿದರು. ಪೂಜೆಯಲ್ಲಿ ಮಕ್ಕಳು,ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಎಲ್ಲಾರೂ ಪಾಲ್ಗೊಳ್ಳಲು ಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೆ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು .
ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಇಂದಿನ ಸಮಾರಂಭಕ್ಕೆ ಸಹಕರಿಸಿದ ಎಲ್ಲರನ್ನೂ ಧರ್ಮ ಗುರುಗಳು ಸ್ಮರಿಸಿ, ವಂದಿಸಿದರು. ಈ ಸಂದರ್ಭದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿ ಗಳನ್ನು ಸನ್ಮಾನಿಸಲಾಯಿತು.